HomeKarnatakaBREAKING: 7 ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

BREAKING: 7 ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಕಾರವಾರ: ಇತ್ತೀಚಿನ ದಿನಗಳಲ್ಲಿ ಮತ್ತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ವರದಿಯಾಗುತ್ತಿದೆ. 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪಾಲಿ ಗವಳಿವಾಡ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 13 ವರ್ಷದ ಗಂಗು ಗವಳಿ ಹೃದಯಾಘಾತದಿಂದ ಸಾವನ್ನಪ್ಪಿರುವ ವಿದ್ಯಾರ್ಥಿನಿ. 7ನೇ ತರಗಟಿಯಲ್ಲಿ ಓದುತ್ತಿದ್ದಳು.

ಮೃತ ವಿದ್ಯಾರ್ಥಿನಿಗೆ ಯಾವುದೇ ಕಾಯಿಲೆಗಳು ಇರಲಿಲ್ಲ. ಹೃದಯ ಸಂಬಂಧಿ ಸಮಸ್ಯೆಯಿಂದ ಕೂಡ ಬಳಲುತ್ತಿರಲಿಲ್ಲ. ಆರೋಗ್ಯವಾಗಿಯೇ ಇದ್ದು, ಎಲ್ಲಾ ಮಕ್ಕಳಂತೆ ನಿತ್ಯ ಆಟ-ಪಾಠಗಳಲ್ಲಿ ತೊಡಗಿಕೊಂಡಿದ್ದಳು. ಸಾವಿಗೂ ಮುನ್ನ ದಿನ ಸಂಜೆವರೆಗೂ ವಿದ್ಯಾರ್ಥಿನಿ ಆಟಆಡುತ್ತಿದ್ದಳು. ಮರುದಿನ ಬೆಳಿಗ್ಗೆ ಎದ್ದಾಗ ವಾಂತಿಯಾಗಿದೆ. ವಾಂತಿ ಮಾಡಿದ ಕೆಲ ಸಮಯದಲ್ಲೇ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular