HomeIndiaಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಗ್ಯಾಂಗ್ ರೇಪ್: ಓರ್ವ ಆರೋಪಿ ಅರೆಸ್ಟ್

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಗ್ಯಾಂಗ್ ರೇಪ್: ಓರ್ವ ಆರೋಪಿ ಅರೆಸ್ಟ್

ಜೈಪುರ: ಶಾಲೆಗೆ ಹೋಗುತ್ತಿದ್ದ 15 ವರ್ಷದ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದಿದೆ.

ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿರುವ ದುಷ್ಕರ್ಮಿಗಳು ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆರೋಪಿಗಳ ಬಂಧನಕ್ಕೆ ಪ್ರತಿಭಟನೆ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಆರೋಪಿಯನ್ನು ರಾಹುಲ್ ಸೈನಿ (23) ಎಂದು ಗುರುತಿಸಲಾಗಿದೆ. ಆರೋಪಿ ಮೊಬೈಲ್ ನಲ್ಲಿದ್ದ ಅಶ್ಲೀಲ ವಿಡಿಯೋಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮೊಬೈಲ್ ನಲ್ಲಿ ಹಲವು ಯುವತಿಯರ ಅಶ್ಲಿಲ ವಿಡಿಯೋಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಮಾಡಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಮೂವರೂ ದೌಸಾ ಜಿಲ್ಲೆಯ ಬಸ್ವಾ ಪ್ರದೇಶದ ನಿವಾಸಿಗಳು ಎಂದು ಹೇಳಲಾಗುತ್ತದೆ. ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್ ನಡೆಸಿ ಕೃತ್ಯದ ಬಳಿಕ ಬಾಲಕಿಯನ್ನು ಅಪಹರಿಸಿದ್ದ ಜಾಗದ ಬಳಿಯೇ ತಂದು ಬಿಡಲಾಗಿದೆ. ಗ್ರಾಮಸ್ಥರು ಆರೋಪಿಯ ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular