HomeLatest NewsBREAKING: ಶಾಲೆಯ ಕಟ್ಟಡದಿಂದ ಬಿದ್ದ SSLC ವಿದ್ಯಾರ್ಥಿನಿ

BREAKING: ಶಾಲೆಯ ಕಟ್ಟಡದಿಂದ ಬಿದ್ದ SSLC ವಿದ್ಯಾರ್ಥಿನಿ

ಬೆಂಗಳೂರು: ಶಾಲೆಯ ಎರಡನೇ ಮಹಡಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಕೆಳಗೆ ಬಿದ್ದಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ.

ಮಲ್ಲೇಶ್ವಂರನ 13ನೇ ಕ್ರಾಸ್ ನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಎರಡನೇ ಮಹಡಿಯಿಂದ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ. ವಿದ್ಯಾರ್ಥಿನಿಯನ್ನು ತಕ್ಷಣ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿನಿ ಬೆಳಿಗ್ಗೆ ಉಪಹಾರ ಸೇವಿಸಿರಲಿಲ್ಲ, ಇದರಿಂದ ತಲೆಸುತ್ತುಬಂದು ಕೆಳಗೆ ಬಿದ್ದಿದ್ದಾಳೆ ಎನ್ನಲಾಗಿದೆ. ಆಸ್ಪತ್ರೆಗೆ ಶಾಸಕ ಅಶ್ವತ್ಥನಾರಾಯಣ ಭೇಟಿ ನೀಡಿ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular