HomeKarnatakaವಿದ್ಯಾರ್ಥಿಗಳ ಗಮನಕ್ಕೆ : ಇಂದಿನಿಂದ ʻCETʼ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ವಿದ್ಯಾರ್ಥಿಗಳ ಗಮನಕ್ಕೆ : ಇಂದಿನಿಂದ ʻCETʼ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು : ವೃತ್ತಿಪರ ಕೋರ್ಸ್‌ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ನ್ಯಾಚೂರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಬಿ.ಎಸ್ಸಿ, ಕೃಷಿ ಕೋರ್ಸ್‌ ಗಳು, ಪಶುಸಂಗೋಪನೆ, ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸ್‌ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಸಿಇಟಿ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರಿಷ್ಕರಿಸಿದ್ದು, ಈ ಮೊದಲು ಏಪ್ರಿಲ್‌ 20 ಮತ್ತು 21 ರಂದು ಪರೀಕ್ಷೆ ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿತ್ತು. ಆದರೆ ಅದೇ ದಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆ ನಿಗದಿಯಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಏ. 18 ರಿಂದ 20 ರವರೆಗೆ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular