HomeKarnatakaSSLC ವಿದ್ಯಾರ್ಥಿಗಳ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ ದುರುಳರು: FIR ದಾಖಲು

SSLC ವಿದ್ಯಾರ್ಥಿಗಳ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ ದುರುಳರು: FIR ದಾಖಲು

ಬೆಂಗಳೂರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಬ್ಬರ ಮೇಲೆ ದುರುಳರು ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿ ನಡೆದಿದೆ.

ಮಾರ್ಚ್ 17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು ವಾಸವಾಗಿದ್ದ ಸ್ಥಳಕ್ಕೆ ನುಗ್ಗಿದ ದುಷ್ಕರ್ಮಿಗಳು ತಡರಾತ್ರಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಮೇಲಿನ ಹಲ್ಲೆ ಬಗ್ಗೆ ಪೋಷಕರು ಚಂದ್ರಾಲೇಔಟ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular