ರಾಜ್ಯದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : 2023-24ನೇ ಸಾಲಿನಲ್ಲಿ ಒಂದರಿಂದ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಿಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2023-24ನೇ ಸಾಲಿನಲ್ಲಿ 1ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:08.12.2023 ರಂದು ನಿಗದಿಪಡಿಸಿ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿತ್ತು.

ಮುಂದುವರೆದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಮನವಿಯಂತೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.  2023-24ನೇ ಸಾಲಿನಲ್ಲಿ 1ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು 20.12.2023 ರವರೆಗೆ ವಿಸ್ತರಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read