HomeKarnatakaವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ ಪಾಸ್ ವಿತರಣೆ ಬಗ್ಗೆ ಮಾಹಿತಿ

ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ ಪಾಸ್ ವಿತರಣೆ ಬಗ್ಗೆ ಮಾಹಿತಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಜೂನ್ 1ರಿಂದ ಬಿಎಂಟಿಸಿ, ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಲಿದೆ. ಬಸ್ ಪಾಸ್ ಗಳಿಗಾಗಿ ಅರ್ಜಿಯನ್ನು https://sevasindhu.karnataka.gov.inನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ಪಾಸ್ ಗಳು ದೊರೆಯುವ ಸ್ಥಳ: ಬೆಂಗಳೂರು ಒನ್, ಕೆಂಪೇಗೌಂಡ ಬಸ್ ನಿಲ್ದಾಣ-ಮೆಜೆಸ್ಟಿಕ್, ಕೆಂಗೇರಿ ಟಿಟಿಎಂಸಿ, ಶಾಂತಿನಗರ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ಸ್ ಸಿಟಿ ಡಿಪೋ-19, ಆನೇಕಲ್ ಬಸ್ ನಿಲ್ದಾಣಗಳಲ್ಲಿ ಬೆಳಿಗ್ಗೆ 8 ಗಂತೆಯಿಂದ ಸಂಜೆ 6:30ರವರೆಗೆ ಪಾಸ್ ಗಳನ್ನು ವಿತರಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಶಕ್ತಿ ಯೋಜನೆಯಡಿ ಕರ್ನಾಟಕದಲ್ಲಿ ನೆಲೆಸಿರುವ ವಿದ್ಯಾರ್ಥಿನಿಯರು ಬಿಎಂಟಿಸಿಯ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ತಿಳಿಸಿದೆ.

ಹೆಚ್ಚಿನ ವಿವರಗಳಿಗಾಗಿ ಬಿಎಂಟಿಸಿ ಕಾಲ್ ಸೆಂಟರ್ ಸಂಖ್ಯೆ 080-22483777 ಅಥವಾ ಬಿಎಂಟಿಸಿ ವೆಬ್ ಸೈಟ್ ಗೆ ಭೇಟಿ ನೀಡಬಹುದು.

For Latest News Updates, Join Our Whatsapp Community🚩
RELATED ARTICLES

Most Popular