HomeLatest NewsBREAKING : ಶಿವಮೊಗ್ಗದಲ್ಲಿ 'CET' ಪರೀಕ್ಷೆ ವೇಳೆ ವಿದ್ಯಾರ್ಥಿ ಜನಿವಾರಕ್ಕೆ ಕತ್ತರಿ : ನಾಲ್ವರು ಅಧಿಕಾರಿಗಳ...

BREAKING : ಶಿವಮೊಗ್ಗದಲ್ಲಿ ‘CET’ ಪರೀಕ್ಷೆ ವೇಳೆ ವಿದ್ಯಾರ್ಥಿ ಜನಿವಾರಕ್ಕೆ ಕತ್ತರಿ : ನಾಲ್ವರು ಅಧಿಕಾರಿಗಳ ವಿರುದ್ಧ ‘FIR’ ದಾಖಲು.!

ಶಿವಮೊಗ್ಗ: ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗೆ ಬಲವಂತವಾಗಿ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದ ಸಿಬ್ಬಂದಿ ಎಡವಟ್ಟು ಮಾಡಿಕೊಂಡಿದ್ದು, ಈ ವಿಚಾರ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಕಾರಣವಾಗಿದೆ.’

ಘಟನೆ ಸಂಬಂಧ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ ದೊಡ್ಡಪೇಟೆ ಠಾಣೆಗೆ ದೂರು ನೀಡಲಾಗಿದೆ. ಅವರ ದೂರು ಆಧರಿಸಿ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ . ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ್ ಭಾಗವತ್ ಅವರು ಸಿಇಟಿ ಪರೀಕ್ಷಾ ನಿಯೋಜಿತ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಎರಡನೇ ದಿನದ ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಯೋರ್ವನಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆದಿಟ್ಟು ಪರೀಕ್ಷಾ ಕೇಂದ್ರಕ್ಕೆ ಹೋಗುವಂತೆ ಹೇಳಿದ್ದಾರೆ. ಆದರೆ ವಿದ್ಯಾರ್ಥಿ ಇದು ಗಾಯತ್ರಿ ದೀಕ್ಷೆಪಡೆದು ಹಾಕಿರುವ ಜನಿವಾರ ಇದನ್ನು ತೆಗೆಯುವುದಿಲ್ಲ ಎಂದು ಹೇಳಿದ್ದಾನೆ. ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರಕ್ಕೆ ಬಿಡಲ್ಲ ಎಂದಿದ್ದಾರೆ. ವಿದ್ಯಾರ್ಥಿ ಸಾಕಷ್ಟು ಬಾರಿ ಕೇಳಿಕೊಂಡರೂ ಒಪ್ಪದ ಸಿಬ್ಬಂದಿಗಳು ಬಲವಂತವಾಗಿ ವಿದ್ಯಾರ್ಥಿಯಿಂದ ಜನಿವಾರ ಹಾಗು ಆತನ ಕೈಲಿದ್ದ ಕಾಶಿದಾರವನ್ನು ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಸಿಇಟಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳ ಈ ವರ್ತನೆಗೆ ವಿದ್ಯಾರ್ಥಿ ಕುಟುಂಬದವರು ಹಾಗೂ ಬ್ರಾಹ್ಮಣ ಮಹಾಸಭಾ, ವಿಪ್ರ ಸಂಘಟನೆ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ. ಸಿಇಟಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ. ಈ ಬಗ್ಗೆ ದೂರನ್ನು ಕೂಡ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular