ಪ್ರವಾಸದ ವೇಳೆ ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಕಿರುಕುಳ: ಉಪನ್ಯಾಸಕರ ವಿರುದ್ಧ ದೂರು

ರಾಮನಗರ: ವಿದ್ಯಾರ್ಥಿನಿಯರಿಗೆ ಮದ್ಯಪಾನ ಮಾಡಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮೂವರು ಉಪನ್ಯಾಸಕರ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ್, ನಾಗೇಶ್ ಅವರ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪತ್ರದ ನಂತರ ವಿಚಾರ ಬೆಳಕಿಗೆ ಬಂದಿದೆ.

ಮಡಿಕೇರಿಗೆ ಪ್ರವಾಸಕ್ಕೆ ವಿದ್ಯಾರ್ಥಿನಿಯರನ್ನು ಕರೆದೊಯ್ಯಲಾಗಿತ್ತು. ಅಕ್ಟೋಬರ್ 5ರಿಂದ 10ರವರೆಗೆ ಪ್ರವಾಸ ಕೈಗೊಳ್ಳಲಾಗಿತ್ತು. ಆಗ ಘಟನೆ ನಡೆದಿದೆ. ಮೂವರು ವಿದ್ಯಾರ್ಥಿನಿಯರನ್ನು ಕೂಡಿ ಹಾಕಿ ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದೆ. ಕಾಲೇಜಿಗೆ ಬಂದ ಬಳಿಕ ಮಹಿಳಾ ಉಪನ್ಯಾಸಕರಿಗೆ ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದಾರೆ. ಕಾಲೇಜು ಅಂದಮೇಲೆ ಇದು ಕಾಮನ್ ಎಂದು ಅಧ್ಯಾಪಕಿಯರು ಹೇಳಿದ್ದಾರೆ ಎನ್ನಲಾಗಿದೆ.

ನಂತರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಮಾಹಿತಿ ತಲುಪಿದೆ. ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಆಯೋಗ ಸೂಚನೆ ನೀಡಿದೆ. 7 ದಿನದೊಳಗೆ ವರದಿ ಸಲ್ಲಿಸುವಂತೆ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read