ವಿದ್ಯಾರ್ಥಿಗಳಿಂದಲೇ ಶಿಕ್ಷಕರಿಗೆ ಕಿರುಕುಳ: ಸಿಎಂಗೆ ಪತ್ರ ಬರೆದ ಶಿಕ್ಷಣ ಸಂಸ್ಥೆಗಳು

ಬೆಂಗಳೂರು: ವಿದ್ಯಾರ್ಥಿಗಳೇ ಶಿಕ್ಷಕರಿಗೆ ಕಿರುಕುಳ ನೀಡುವುದು, ಅವಮಾನ ಮಾಡುವುದು, ದುರ್ವರ್ತನೆ ತೋರುವ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಹುಚ್ಚಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಿಯಮ ರೂಪಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿವೆ.

ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸಲು ಹಾಗೂ ಶಿಕ್ಷಣ ವಾತಾವರಣವನ್ನು ಸುಧಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಿಯಮ ರೂಪಿಸುವಂತೆ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಕಾಟಕ್ಕೆ ಶಿಕ್ಷಕರು ಬೇಸತ್ತು ಹೋಗುವ ಸ್ಥಿತಿ ಇದೆ. ಅದರಲ್ಲೂ ಕೆಲ ದಿನಗಳ ಹಿಂದಷ್ಟೇ ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಯೋರ್ವ ಹೇಳಿದ್ದ ಮಾತು ಮುಜುಗರವನ್ನುಂಟು ಮಾಡಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಶಾಲೆಗಳಲ್ಲಿ ಕನಿಷ್ಠ ಶಿಸ್ತುಕ್ರಮದ ನಿಯಮ ಜಾರಿಗೆ ತರಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಕನಿಷ್ಠ ನಿಯಮ ಹಾಗೂ ಮಾನದಡಗಳನ್ನು ಶಾಲಾ ಹಂತದಲ್ಲಿ ಜಾರಿಗೆ ತರಬೇಕು ಈ ಬಗ್ಗೆ ಖಾಸಗಿ ಶಾಲೆಗಳ ಸಂಘಟನೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ.

ವಿವಿಧ ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿಗಳ ದುರ್ವರ್ತನೆ ಬಗ್ಗೆ, ಶಿಕ್ಷಕರಿಗೆ ಕಿರುಕುಳ, ಅಪಮಾನ ಮಾಡುವುದು, ಹಲ್ಲೆಗಳ ಬಗ್ಗೆ ದೂರು ಕೇಳಿಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ದುರ್ವರ್ತನೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿವೆ.

ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ಶೋಷಣೆಗಳಿಗೆ ಒಳಗಾಗುತ್ತಾರೆ. ವಿದ್ಯಾರ್ಥಿಗಳು ಕಿರುಕುಳ ನೀಡುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿಬರುತ್ತಿವೆ. ಶಾಲಾ ಸಿಬ್ಬಂದಿಗಳಿಗೆ ಅವಾಚ್ಯಶಬ್ದಗಳಿಂದ ನಿಂದಿಸುತ್ತಾರೆ. ಇವುಗಳಿಗೆ ಕಡಿವಾಣ ಹಾಕಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಮನವಿ ಮಾಡಿವೆ ಎಂದು ಕ್ಕ್ಯಾಮ್ಸ್ ಖಾಸಗಿ ಶಾಲೆಗಳ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read