HomeEntertainmentರಾಜ್ಯಾದ್ಯಂತ ಬಿಡುಗಡೆ ಆಯ್ತು 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ'

ರಾಜ್ಯಾದ್ಯಂತ ಬಿಡುಗಡೆ ಆಯ್ತು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ತನ್ನ ಟ್ರೈಲರ್ ಹಾಗೂ ಹಾಡುಗಳ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಇಂದು ರಾಜ್ಯದ್ಯಂತ ತೆರೆ ಕಂಡಿದೆ. ಅರುಣ್ ಅಮುಕ್ತ ನಿರ್ದೇಶನದ ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಂಡಿದೆ.

ಈ ಚಿತ್ರದಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ, ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಬಣ್ಣ ಹಚ್ಚಿದ್ದಾರೆ ವೆರೈಟಿ ಕ್ರಿಯೇಶನ್ಸ್ ಬ್ಯಾನರ್ ನಡಿ  ಸುಬ್ರಹ್ಮಣ್ಯ ಕುಕ್ಕೆ ಹಾಗೂ ಶಿವಲಿಂಗೇಗೌಡ ನಿರ್ಮಾಣ ಮಾಡಿದ್ದಾರೆ. ಪವನ್ ಗೌಡ ಸಂಕಲನ, ಅರುಣ್ ಸುರೇಶ್ ಛಾಯಾಗ್ರಹಣ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ಹಾಗೂ ಟೈಗರ್ ಶಿವು ಮತ್ತು ನರಸಿಂಹ ಅವರ ಸಾಹಸ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular