ಮುಂಡಗೋಡ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 22 ವಿದ್ಯಾರ್ಥಿಗಳು ಅಸ್ವಸ್ಥಾರಿಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ.
ಮುಂಡಗೋಡಿನ ಮಾದರಿ ಶಾಲೆಯ 22 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಊಟದಲ್ಲಿ ಇಲಿಯ ಹಿಕ್ಕೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಎಂದಿನಂತೆ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ.
ತಕ್ಷಣ ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳನ್ನು ಒಂದಿ ದಿನ ನಿಗಾದಲ್ಲಿಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ.
