HomeKarnatakaವಿದ್ಯಾರ್ಥಿಗಳ ಗಮನಕ್ಕೆ : IAS/KAS ಪರೀಕ್ಷಾ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ

ವಿದ್ಯಾರ್ಥಿಗಳ ಗಮನಕ್ಕೆ : IAS/KAS ಪರೀಕ್ಷಾ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ಸಂಬಂಧ “ಆನ್ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ 2023-24 ನೇ ಸಾಲಿಗೆ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಭೇತಿ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ನಲ್ಲಿ https://sevasindhu.karnataka.gov.xn--in-2sh0gpe2dqe/ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ.

ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರ್ರಿಶ್ಚಿಯನ್, ಬೌದ್ಧ, ಜೈನ್, ಪಾರ್ಸಿ, ಸಿಖ್) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ 21 ರಿಂದ 35 ವರ್ಷಗಳು ಮೀರಿರಬಾರದು. ಈಗಾಗಲೇ ಇಲಾಖೆ/ಖಾಸಾಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಸೆಷ್ಟೆಂಬರ್, 16 ಕೊನೆ ದಿನವಾಗಿದೆ. ದೂರವಾಣಿ ಸಂಖ್ಯೆ: 08272-225528/220214 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular