
ಈ ಯೋಜನೆಯಡಿ ನವೀನ ವಿದ್ಯಾರ್ಥಿಗಳು ಹಾಗೂ ಕಾರಣಾಂತರಗಳಿಂದ ಇದುವರೆಗೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದೇ ಇರುವ ನವೀಕರಣ ವಿದ್ಯಾರ್ಥಿಗಳು ಮತ್ತು ಕಳೆದ ಸಾಲಿನಲ್ಲಿ ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿವೇತನ ಜಮೆಯಾಗದೇ ಇರುವ ವಿದ್ಯಾರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸಾಗರ ತಾಲ್ಲೂಕು, ದೂರವಾಣಿ ಸಂಖ್ಯೆ: 9480843192 ನ್ನು ಸಂಪರ್ಕಿಸಬಹುದೆಂದು ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-2) ತಿಳಿಸಿದ್ದಾರೆ.

