HomeKarnatakaವಿದ್ಯಾರ್ಥಿಗಳೇ ಗಮನಿಸಿ : ಕ.ರಾ.ಮು.ವಿವಿಯಲ್ಲಿ ವಿವಿಧ ಕೋರ್ಸ್'ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಥಿಗಳೇ ಗಮನಿಸಿ : ಕ.ರಾ.ಮು.ವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024-25 ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ.

ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ [ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ] ಹಾಗು ಸ್ನಾತಕೋತ್ತರ ಪಿ.ಜಿ. ಕೋಸ್ರ್ಗಳಾದ [ಎಂ.ಎ, ಎಂ.ಎ-ಪತ್ರಿಕೋದ್ಯಮ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲೂ] [ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್] ಕೋಸ್ರ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರವೇಶಾತಿಗೆ ಅಗತ್ಯ ದಾಖಲೆಗಳು ಕಡ್ಡಾಯವಾಗಿದೆ. ಎಸ್ಎಸ್ಲ್ಸಿ ಅಂಕಪಟ್ಟಿ ಜೆರಾಕ್ಸ್ ಪಿಯುಸಿ ಅಥವಾ ತತ್ಸಮಾನ ಅಂಕಪಟ್ಟಿ ಜೆರಾಕ್ಸ್. ಪದವಿ ಅಂಕಪಟ್ಟಿ ಜೆರಾಕ್ಸ್ (ಎಲ್ಲಾ ವರ್ಷಗಳ ಅಥವಾ ಎಲ್ಲಾ ಸೆಮಿಸ್ಟರ್ಗಳು), ಆಧಾರ್ ಕಾರ್ಡ್ ಜೆರಾಕ್ಸ್. ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಖಾತೆ ಹೋಲ್ಡರ್ ಹೆಸರು, ಬ್ಯಾಂಕ್ ಹೆಸರು, I ಕೋಡ್. ನಾಲ್ಕು ಫೋಟೋಗಳು. ದೂರವಾಣಿ ಸಂಖ್ಯೆ, ವಿದ್ಯಾರ್ಥಿ ಇ-ಮೇಲ್ ಐಡಿ, ಬಿಪಿಎಲ್ ಕಾರ್ಡ್ (ಮಹಿಳೆಯರಿಗೆ ಮಾತ್ರ). ಎಟಿಎಂ ಕಾರ್ಡ್, ಫೋನ್ ಪೇ, ಗೂಗಲ್ ಪೇ, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ. 9844395986, 8296215714, 9483570900, 7411233007 ಈ ದೂರವಾಣಿಯ ಮುಖಾಂತರ ವಿವರ ಪಡೆಯಬಹುದಾಗಿದೆ.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ 2024-25 ಜುಲೈ ಆವೃತ್ತಿಯ ಪ್ರವೇಶಾತಿಯನ್ನು ಎಲ್ಲಾ ಸರ್ಕಾರಿ ರಜೆ ದಿನದಂದು ಹಾಗೂ ಎಲ್ಲಾ ಶನಿವಾರ ಮತ್ತು ಭಾನುವಾರದಂದು ಪ್ರವೇಶಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular