HomeKarnatakaಪೊಲೀಸ್ ಇಲಾಖೆ ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು

ಪೊಲೀಸ್ ಇಲಾಖೆ ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಮಕ್ಕಳ ಉನ್ನತ ಶಿಕ್ಷಣಕ್ಕೆ ಪೊಲೀಸ್ ಕಲ್ಯಾಣ ನಿಧಿಯಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಂಬಂಧಿಸಿದ ಡಿಸಿಪಿ ಕಚೇರಿ ಮೂಲಕ ಅಕ್ಟೋಬರ್ 20 ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಪದವಿ, ಸ್ನಾತಕೋತ್ತರ ಪದವಿಯಲ್ಲಿ ಹಿಂದಿನ ಪರೀಕ್ಷೆಯಲ್ಲಿ ಶೇಕಡ 60ಕ್ಕೂ ಹೆಚ್ಚು ಅಂಕ ಪಡೆದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಪ್ಲೋಮಾ ಕೋರ್ಸ್, ಪದವಿ ವಿದ್ಯಾರ್ಥಿಗಳಿಗೆ 10 ಸಾವಿರ ರೂ., ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 20 ಸಾವಿರ ರೂ., ಎಂಇ, ಎಂಟೆಕ್, ಎಲ್.ಎಲ್.ಎಂ., ಎಂ.ವಿ.ಎಸ್. ಪದವಿ ವಿದ್ಯಾರ್ಥಿಗಳಿಗೆ 30 ಸಾವಿರ ರೂ., ವೈದ್ಯಕೀಯ ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ ರೂ., ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 40 ಸಾವಿರ ರೂ. ನೀಡಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular