ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಸಿಡಿದೆದ್ದ ABVP ಕಾರ್ಯಕರ್ತರು, ವಿದ್ಯಾರ್ಥಿಗಳು

ವಿಜಯಪುರ : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ABVP ಕಾರ್ಯಕರ್ತರು, ವಿದ್ಯಾರ್ಥಿಗಳು ಸಿಡಿದೆದ್ದು ಪ್ರತಿಭಟನೆ ನಡೆಸಿದ್ದಾರೆ.

ಉಚಿತ ಪ್ರಯಾಣದ ಬಸ್ ಗಳು ತುಂಬಿ ತುಳುಕುತ್ತಿರುತ್ತದೆ, ಇದರಿಂದ ನಮಗೆ ನಿಗದಿತ ಸಮಯದಲ್ಲಿ ಶಾಲಾ, ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ABVP ಕಾರ್ಯಕರ್ತರು, ವಿದ್ಯಾರ್ಥಿಗಳು ವಿಜಯಪುರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಶಕ್ತಿ ಯೋಜನೆಯಿಂದ ಬಸ್ ಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ, ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗುತ್ತಿದೆ. ತರಗತಿಗಳಿಗೆ ಸರಿಯಾದ ಸಮಯಕ್ಕೆ ಹೋಗಲು ಆಗುತ್ತಿಲ್ಲ. ಸರ್ಕಾರ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read