HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿವೇತನ ಪಾವತಿಗೆ ‘ಏಕ ಶಿಷ್ಯವೇತನ’ ನಿರ್ವಹಣೆಗೆ ಸರ್ಕಾರ ಆದೇಶ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿವೇತನ ಪಾವತಿಗೆ ‘ಏಕ ಶಿಷ್ಯವೇತನ’ ನಿರ್ವಹಣೆಗೆ ಸರ್ಕಾರ ಆದೇಶ

ಬೆಂಗಳೂರು: ಎಲ್ಲಾ ವಿದ್ಯಾರ್ಥಿ ವೇತನ ಒಂದೇ ಕಡೆ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಉನ್ನತ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ನೀಡುವ ಎಲ್ಲಾ ರೀತಿಯ ಶಿಷ್ಯವೇತನ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಏಕ ಶಿಷ್ಯವೇತನ ಕಾರ್ಯಕ್ರಮದಡಿ ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.

2023 -24ನೇ ಸಾಲಿನಿಂದ ಉನ್ನತ ಶಿಕ್ಷಣ ಇಲಾಖೆಯ ಬರುವ ದಿನ ಇಲಾಖೆಗಳು ಮತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳು, ಸರ್ಕಾರದ ಅನುದಾನಿತ, ಅರೆ ಸರ್ಕಾರಿ, ಸ್ವಂತ ನಿಧಿ, ದತ್ತಿನಿಧಿ, SCP, TSP, ಒಬಿಸಿ, ಅಲ್ಪಸಂಖ್ಯಾತ ಅನುದಾನದಿಂದ ಒದಗಿಸಲಾಗುವ ಎಲ್ಲಾ ರೀತಿಯ ವಿದ್ಯಾರ್ಥಿ ವೇತನ, ಸಹಾಯಧನ, ನಗದು ಪುರಸ್ಕಾರವನ್ನು ಇ- ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಸ್ಟೇಟಸ್ ಸ್ಕಾಲರ್ ಶಿಪ್ ಪೋರ್ಟಲ್ ಮೂಲಕ ನೇರವಾಗಿ ಖಾತೆಗೆ ಪಾವತಿಸುವಂತೆ ಸರ್ಕಾರ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular