HomeLatest Newsವಿದ್ಯಾರ್ಥಿಗಳೇ ಗಮನಿಸಿ: ಇಂದು ಬೆಳಗ್ಗೆ 11 ಗಂಟೆಗೆ CISCE 10, 12ನೇ ತರಗತಿ ಫಲಿತಾಂಶ ಪ್ರಕಟ

ವಿದ್ಯಾರ್ಥಿಗಳೇ ಗಮನಿಸಿ: ಇಂದು ಬೆಳಗ್ಗೆ 11 ಗಂಟೆಗೆ CISCE 10, 12ನೇ ತರಗತಿ ಫಲಿತಾಂಶ ಪ್ರಕಟ

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್(ಸಿ.ಐ.ಎಸ್.ಸಿ.ಇ.) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಏಪ್ರಿಲ್ 30ರ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.

ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೋಸೆಫ್ ಇಮಾನ್ಯುಯೆಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿ.ಐ.ಎಸ್.ಸಿ.ಇ. 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆ ಫಲಿತಾಂಶ ಮಂಡಳಿಯ ವೆಬ್ಸೈಟ್ ಅಥವಾ ಕೆರಿಯರ್ ಪೋರ್ಟಲ್ ನಲ್ಲಿ ಪ್ರಕಟವಾಗಲಿದೆ. ಡಿಜಿ ಲಾಕರ್ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

CISCE 10ನೇ 12ನೇ ತರಗತಿ ವಿದ್ಯಾರ್ಥಿಗಳು ಬೆಳಿಗ್ಗೆ 11 ಗಂಟೆಯ ನಂತರ ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ಗಳಾದ results.cisce.org ಮತ್ತು cisce.org ನಲ್ಲಿ ಪರಿಶೀಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮ್ಮ ಅಂಕಗಳನ್ನು ವೀಕ್ಷಿಸಲು, ಅಭ್ಯರ್ಥಿಗಳು ತಮ್ಮ ವಿಶಿಷ್ಟ ID, ಸೂಚ್ಯಂಕ ಸಂಖ್ಯೆ ಮತ್ತು ಲಾಗಿನ್ ಪುಟದಲ್ಲಿ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕಾಗುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular