ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ 2025-26ನೇ ಜನವರಿ ಆವೃತ್ತಿ ಪ್ರವೇಶಾತಿ 2026ರ ಮಾರ್ಚ್ 30 ಕೊನೆಯ ದಿನಾಂಕ ವನ್ನು ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.
ಕೆಲಸಕ್ಕೆ ಹೋಗುವ ಆಸಕ್ತರು ಕ.ರಾ.ಮು.ವಿ ಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2026ರ ರವರೆಗೆ ಏಪ್ರಿಲ್ 10 ಸಾರ್ವತ್ರಿಕ ರಜಾ ದಿನಗಳಾದ ಗುಡ್‍ಫ್ರೈಡೇ ಶುಕ್ರವಾರ ಹಾಗೂ ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿ ಕಲ್ಪಿಸಲಾಗಿದೆ.
ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಲಿಬ್‍ಐಎಸ್ಸಿ, ಬಿಎಸ್ಸಿ, (ಜನರಲ್ ಐಟಿ) ಬಿಎಸ್ ಡಬ್ಲ್ಯು, ಎಂಎ, ಎಂಸಿಜೆ, ಎಂಕಾಂ, ಎಂಎಸ್ಸಿ, ಎಂಲಿಬ್‍ಐಎಸ್ಸಿ, {ಎಂಬಿಎ, ಎಂಸಿಎ,} ಎಂಎಸ್‍ಡಬ್ಲ್ಯು ಮತ್ತು ಪಿಜಿ ಸರ್ಟಿಫಿಕೇಟ್ ಡಿಪ್ಲೊಮಾ ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕೆಎಸ್‍ಒಯು ಯುಜಿಸಿ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್‍ನಿಂದ “ಂ+” ಮಾನ್ಯತೆ ಪಡೆದಿದೆ ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್‍ಮೂಲಕ ನೀಡುವ ಪದವಿಗಳಿಗೆ ಸಮನಾದ ಅರ್ಹತೆ ಇರುತ್ತದೆ ಎಂದು ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: ಕ.ರಾ.ಮು.ವಿ ಪ್ರಾದೇಶಿಕ ನಿರ್ದೇಶಕರು ಮಡಿಕೇರಿ ಪ್ರಾದೇಶಿಕ ಕೇಂದ್ರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ ಫೀಲ್ಡ್‍ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣ ಕಟ್ಟಡ, ಮಡಿಕೇರಿ-571201, ದೂ.ಸಂ. 9844395986, 8296215714, 9483570900 ನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

