HomeLatest Newsವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನೋಂದಣಿ ಅವಧಿ ನ. 15 ರವರೆಗೆ ವಿಸ್ತರಣೆ

ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನೋಂದಣಿ ಅವಧಿ ನ. 15 ರವರೆಗೆ ವಿಸ್ತರಣೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-1ರ ನೋಂದಣಿಗೆ ನೀಡಲಾಗಿದ್ದ ಕಾಲಾವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

 ಅಭ್ಯರ್ಥಿಗಳಿಗೆ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೊದಲು ಅ.31ರವರೆಗೆ ಕಾಲಾವಕಾಶ ನೀಡಲಾಗಿತ್ತು. ಅ. 18ರವರೆಗೆ ಶಾಲೆಗಳಿಗೆ ರಜೆ ಇದ್ದ ಕಾರಣ ಕೆಲವು ಶಾಲೆಗಳು, ಪೋಷಕರು ಸಮಯ ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಗಡುವನ್ನು ನ.15 ರವರೆಗೆ ವಿಸ್ತರಿಸಲಾಗಿದೆ.

2026ರ ಮಾರ್ಚ್ ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿದೆ. ಪರೀಕ್ಷೆ ಬರೆಯಲು ಬಯಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು, ಆನ್ಲೈನ್ ಮೂಲಕ ನೇರವಾಗಿ ನೋಂದಾಯಿಸುವ ಖಾಸಗಿ ಅಭ್ಯರ್ಥಿಗಳು ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳುವಂತೆ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular