ಬೆಂಗಳೂರು : ಅಪೂರ್ಣ ಫಲಿತಾಂಶ ಬಂದಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, exam-೨ ,exam-೩ ನಲ್ಲಿ ನಿಮ್ಮ ಪ್ರಯತ್ನ ಯಶಸ್ವಿಯಾಗಲಿ ಎಂದು ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.
ಎಸ್. ಎಸ್. ಎಲ್. ಸಿ. ಪರೀಕ್ಷೆ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು….ಅಪೂರ್ಣ ಫಲಿತಾಂಶ ಬಂದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಬರುವ exam-೨ ಮತ್ತು exam-೩ ನಲ್ಲಿ ನಿಮ್ಮ ಪ್ರಯತ್ನ ಯಶಸ್ವಿಯಾಗಲಿ ಎಂದು ಹಾರೈಸುವೆ…ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಕರ್ನಾಟಕ ‘ಎಸ್ ಎಸ್ ಎಲ್ ಸಿ’ ಫಲಿತಾಂಶ ಪ್ರಕಟವಾಗಿದ್ದು, 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ.ಈ ಬಾರಿ ಪರೀಕ್ಷೆಗೆ ಹಾಜರಾದ 842173 ವಿದ್ಯಾರ್ಥಿಗಳ ಪೈಕಿ 524984 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಪರೀಕ್ಷೆಗೆ ಹಾಜರಾದ 390311 ಬಾಲಕರ ಪೈಕಿ 226637 ಬಾಲಕರು ಪಾಸಾಗಿದ್ದರೆ, ಪರೀಕ್ಷೆಗೆ ಹಾಜರಾದ 400579 ಬಾಲಕಿಯರ ಪೈಕಿ 296438 ವಿದ್ಯಾರ್ಥಿಗಳು ಪಾಸಾಗಿದ್ದಾರೆ.