HomeLatest NewsSHOCKING: ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳಿಂದಲೇ ಹಲ್ಲೆ: ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡ 5ನೇ ತರಗತಿ ವಿದ್ಯಾರ್ಥಿ

SHOCKING: ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳಿಂದಲೇ ಹಲ್ಲೆ: ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡ 5ನೇ ತರಗತಿ ವಿದ್ಯಾರ್ಥಿ

ಲಖನೌ: ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳೇ ಬಾಲಕನ ಮೇಲೆ ಹಲ್ಲೆ ನಡೆಸಿದ್ದು, ಬಾಲಕ ತನ್ನ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಲಖ್ನೌದಲ್ಲಿ ನಡೆದಿದೆ.

5ನೇ ತರಗತಿ ವಿದ್ಯಾರ್ಥಿ ಕಣ್ಣು ದೃಷ್ಟಿ ಕಳೆದುಕೊಂಡವನು. ಲಖ್ನೌದ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಈ ದುರಂತ ಸಂಭವಿಸಿದೆ. ಶಾಲೆಯ ಆವರಣದಲ್ಲಿ ಇಬ್ಬರು ಮಿದ್ಯಾರ್ಥಿಗಳು ಬಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬಾಲಕನನ್ನು ನೆಲಕ್ಕೆ ಕೆಡವಿ ಶೂ ಧರಿಸಿದ್ದ ಕಾಲಿನಿಂದಲೇ ತುಳಿದಿದ್ದಾರೆ. ಬಾಲಕನ ಮುಖ, ಕಣ್ಣುಗಳನ್ನು ಜಜ್ಜಿದ್ದಾರೆ. ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಗನ ಸ್ಥಿತಿ ಕಂಡು ಗಾಯಾಳು ಬಾಲಕನ ತಾಯಿ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನ್ನ ಮಗನ ಮೇಲೆ ಬೇರೆ ವಿಭಾಗದ ಐದನೇ ಹಾಗೂ ಮೂರನೇ ತರಗತಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನನ್ನ ಮಗ ಕಣ್ಣು ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಕಣ್ಣೀರಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕನನ್ನು ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಅಖಲಿಸಲಾಗಿದೆ. ಘಟನೆಯ ಬಗ್ಗೆ ಶಾಲಾ ಆಡಳಿತ ಮಂಡಳಿಗೆ ತಿಳಿಸಿದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ. ಹಲ್ಲೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಶಾಲೆಯ ದ್ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳೆ ದೂರು ನೀಡಿದ್ದಾರೆ.

ಬಾಲಕನ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular