HomeLatest Newsಬಿಸಿಲ ಝಳ: ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು

ಬಿಸಿಲ ಝಳ: ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು

ಹುಬ್ಬಳ್ಳಿ: ರಾಜ್ಯದಲ್ಲಿ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ಉತ್ತರ ಕರ್ನಾಟಕ, ಬಯಲುಸೀಮೆ ಪ್ರದೇಶಗಳು ಕಾದ ಕಾವಲಿಯಂತಾಗಿವೆ. ತಾಪನ ಹೆಚ್ಚಳದಿಂದ ಹೈರಾಣಾಗಿರುವ ಜನರು ಎಲ್ಲೇ ನೀರು ಕಂಡರು ಸ್ವಲ್ಪ ಹೊತ್ತು ಅಲ್ಲಿಯೇ ಸಮಯಕಳೆಯಲು ಬಯಸುತ್ತಾರೆ. ಇದೇ ರೀತಿ ಬಿಸಿಲ ಝಳದಿಂದ ಕಂಗೆಟ್ಟ ಕಾಲೇಜು ವಿದ್ಯಾರ್ಥಿಗಳಿಬ್ಬರು ಈಜಲು ಹೋಗಿ ನೀರುಪಾಲಾಗಿರುವ ಘಟನೆ ನಡೆದಿದೆ.

ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದೆ. ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೈರಿದೇವರಕೊಪ್ಪದಲ್ಲಿರುವ ರೇಣುಕಾ ನಗರದ 17 ವರ್ಷದ ಸಮರ್ಥ್ ಮತ್ತು ಹರೀಶ್ ಎಂಬ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನ ಹೊಂಡದಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳು.

ಇಬ್ಬರೂ ಅಕ್ಕ-ಪಕ್ಕದ ಮನೆಯ ನಿವಾಸಿಗಳು. ಗೋಪನಕೊಪ್ಪ ಬಳಿಯಿರೋ ಸರ್ಕಾರಿ ಪದವಪೂರ್ವ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ಓದುತ್ತಿದ್ದರು, ಪ್ರಥಮ ಪಿಯುಸಿ ಪರೀಕ್ಷೆ ಮುಗಿದಿರುವ ಕಾರಣ ಮನೆಯಲ್ಲಿದ್ದರು. ಮನೆ ಸಮೀಪ ಇರುವ ನಿರ್ಮಾಣ ಹಂತದ ಆರ್ ಎನ್ ಎಸ್ ಗಾಲ್ಫ್​​ ಮೈದಾನದಲ್ಲಿರೋ ಹೊಂಡಕ್ಕೆ ಈಜಲು ಹೋಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧ್ಯಾಹ್ನ ಮನೆಯಿಂದ ಹೋದವರು, ಸಂಜೆಯಾದರೂ ಬಂದಿರಲಿಲ್ಲ. ಇಬ್ಬರು ಹೊಂಡದಲ್ಲಿ ಮುಳುಗಿರೋದನ್ನು ಗಮನಿಸಿರುವ ಅಲ್ಲಿನ ಕೆಲಸಗಾರರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದರು ಎನ್ನಲಾಗಿದೆ. ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಸಂಬಂಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular