HomeKarnatakaBIG NEWS: ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

BIG NEWS: ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಬೆಳೆಯುವ ಮಕ್ಕಳಿಗೆ ಸ್ವಲ್ಪ ಬುದ್ಧಿವಾದ ಹೇಳಿದರೂ ಅದನ್ನೇ ನೆಪ ಮಾಡಿಕೊಂಡು ದುಡುಕಿನ ನಿರ್ಧಾರ ಕೈಗೊಂಡು ಬಿಡುತ್ತಾರೆ. ಇಂತದ್ದೇ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

ಸದಾ ಕಾಲ ಮೊಬೈಲ್ ನಲ್ಲಿಯೇ ಕಾಲ ಕಳೆಯುತ್ತಿದ್ದ ಮಗನಿಗೆ ಪೋಷಕರು ಬೈದು ಬುದ್ಧಿ ಹೇಳಿದ್ದಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೌರಿಬಿದನೂರಿನ ಚಿತ್ತವಾಳಹಳ್ಳಿಯಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

15 ವರ್ಷದ ಲೋಕೇಶ್ ಮೃತ ವಿದ್ಯಾರ್ಥಿ. ಯಾವಾಗಲೂ ಮೊಬೈಲ್ ನಲ್ಲೇ ಇರಬೇಡ, ವಿದ್ಯಾಭ್ಯಾಸದ ಕಡೆ ಗಮನಕೊಡು ಎಂದು ಪೋಷಕರು ಬುದ್ಧಿ ಹೇಳಿದ್ದರು. ಇದರಿಂದ ಪೋಷಕರ ಜೊತೆ ಜಗಳ ಮಾಡಿಕೊಂಡು ಮನೆಯಿಂದ ಹೊರ ಬಂದ ವಿದ್ಯಾರ್ಥಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ತಂದೆ ಮಗನಿಗೆ ಓದುವಂತೆ ಬೈದಿದ್ದಕ್ಕೆ ವಿದ್ಯಾರ್ಥಿ ಸಾವಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular