ಕೆ.ವಿ.ಟಿ.ಎಸ್.ಡಿ.ಸಿ. ನಿಗಮವು ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಸೆ. 06 ರಂದು ಬೆಂಗಳೂರಿನ ಗಾಯತ್ರಿ ವಿಹಾರ ಪ್ಯಾಲೇಸ್ ಗ್ರೌಂಡ್ ನಲ್ಲಿ ವಿದೇಶದಲ್ಲಿ ಅಧ್ಯಯನ -ಸ್ಟಡಿ ಅಬ್ರಾಡ್ ಎಕ್ಸ್ ಪೋ ಮಾಹಿತಿ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ 60 ಕ್ಕೂ ಹೆಚ್ಚು ವಿದೇಶಿ ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿದ್ದು, ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆ, ವಿದ್ಯಾರ್ಥಿ ವೀಸಾ ಮಾಹಿತಿ ಮತ್ತು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಒಂದೇ ವೇದಿಕೆಯಡಿ ಒದಗಿಸುವ ಅವಕಾಶವನ್ನು ಕಲ್ಪಿಸಲಾಗಿದೆ.
ಆಸಕ್ತರು www.studyabroad.ksdckarnataka.com ವೆಬ್‌ಸೈಟ್ ಮೂಲಕ ನೊಂದಾಯಿಸಿಕೊಂಡು ಮಾಹಿತಿ ಶಿಬಿರದಲ್ಲಿ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅಶೋಕ ಎಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

