HomeKarnatakaಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ‘ಸ್ಟಡಿ ಸರ್ಕಲ್’ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಉಚಿತ ತರಬೇತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ‘ಸ್ಟಡಿ ಸರ್ಕಲ್’ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಉಚಿತ ತರಬೇತಿ

ಬೆಂಗಳೂರು: ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಬೆಂಗಳೂರು ವತಿಯಿಂದ ಸ್ಟಡಿ ಸರ್ಕಲ್‍  ಯೋಜನೆಯಡಿಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ಪ್ರಾಧಿಕಾರಿಗಳು ನಡೆಸುವ ನೇಮಕಾತಿ  ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.

ಜನವರಿ 27 ರಿಂದ ಫೆಬ್ರವರಿ 4 ರವರೆಗೆ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2ನೇ ಬ್ಲಾಕ್‍, ರಾಜಾಜಿನಗರ,  ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಪರೀಕ್ಷಾ ಪೂರ್ವ ತರಬೇತಿಯು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೆ ನಡೆಯಲಿದೆ.

ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಸಿ.ಓ.ಇ ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ಪೀಣ್ಯ, ಬೆಂಗಳೂರು ಅಥವಾ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2ನೇ ಬ್ಲಾಕ್‍ , ರಾಜಾಜಿನಗರ, ಬೆಂಗಳೂರು ಇಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಬೆಂಗಳೂರಿನ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular