BREAKING: ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಠಾತ್ ಹೃದಯಾಘಾತದಿಂದ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ

ಬೆಂಗಳೂರು: ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್(57) ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತದಿಂದ ಅವರು ಕನೆಯುಸಿರೆಳೆದಿದ್ದಾರೆ.

900ಕ್ಕೂ ಹೆಚ್ಚು ಚಿತ್ರಗಳಿಗೆ ಅವರು ಸಾಹಸ ಕಲಾವಿದ, ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಕೇರಳ ಮೂಲದ ಜಾಲಿ ಬಾಸ್ಟಿನ್ 1966 ರಲ್ಲಿ ಜನಿಸಿದ್ದರು. ಬೈಕ್ ಮೆಕಾನಿಕ್ ಆಗಿ ವೃತ್ತಿ ಆರಂಭಿಸಿದ್ದ ಅವರು ಆರಂಭದಲ್ಲಿ ಬೈಕ್ ಚೇಸಿಂಗ್ ದೃಶ್ಯಗಳಲ್ಲಿ ಡ್ಯೂಪ್ ಆಗಿ ಕೆಲಸ ಮಾಡುತ್ತಿದ್ದರು. ಸಾಹಸ ಕಲಾವಿದನಾಗಿ, ಸಾಹಸ ನಿರ್ದೇಶಕನಾಗಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ.

ಅವರಿಗೆ 17 ವರ್ಷ ಆಗಿದ್ದಾಗಲೇ ‘ಪ್ರೇಮಲೋಕ’ ಚಿತ್ರದಲ್ಲಿ ರವಿಚಂದ್ರನ್ ಅವರಿಗೆ ಡ್ಯೂಪ್ ಹಾಕಿದ್ದರು. ಕನ್ನಡ, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ‘ಪ್ರೇಮಲೋಕ’, ‘ಪುಟ್ನಂಜ’, ‘ಅಣ್ಣಯ್ಯ’, ‘ಶಾಂತಿ ಕ್ರಾಂತಿ’ ಸೇರಿದಂತೆ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ಸಾಹಸ ದೃಶ್ಯಗಳ ಚಿತ್ರೀಕರಣ ಸಂದರ್ಭದಲ್ಲಿ ಅನೇಕ ಬಾರಿ ಪೆಟ್ಟು ಮಾಡಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read