HomeKarnatakaBIG NEWS: ಉಪತಹಶೀಲ್ದಾರ್ ಕಿರುಕುಳ; ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ

BIG NEWS: ಉಪತಹಶೀಲ್ದಾರ್ ಕಿರುಕುಳ; ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ

ಮೈಸೂರು: ಉಪತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು ವಿಕಲಚೇತನ ಕಂಪ್ಯೂಟರ್ ಆಪರೇಟರ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.

ಹುಲ್ಲಹಳ್ಳಿ ನಾಡಕಚೇರಿಯ ಕಂಪ್ಯೂಟರ್ ಆಪರೇಟರ್ ಪರಮೇಶ್ ಆತ್ಮಹತ್ಯೆಗೆ ಶರಣಾದವರು. ಉಪತಹಶೀಲ್ದಾರ್ ಶಿವಕುಮಾರ್ ಪರಮೇಶ್ ಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಶಿವಕುಮಾರ್ ಕಿರುಕುಳದಿಂದ ನೊಂದು ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular