HomeKarnatakaBREAKING: ಶಾಸಕ ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ 3 ತಾಲೂಕು ಬಂದ್ ಮಾಡಿ ಪ್ರತಿಭಟನೆ;...

BREAKING: ಶಾಸಕ ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ 3 ತಾಲೂಕು ಬಂದ್ ಮಾಡಿ ಪ್ರತಿಭಟನೆ; ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನಗಳು ಭುಗಿಲೆದ್ದಿವೆ. ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಸಚಿವಾಕಾಂಕ್ಷಿ ಶಾಸಕರು ಭಾರಿ ನಿರಾಶರಾಗಿದ್ದು, ಒಂದೆಡೆ ರಾಜೀನಾಮೆ ನೀಡುತ್ತಿದ್ದರೆ ಮತ್ತೊಂದೆಡೆ ಕೆಲ ಶಾಸಕರು ಶಾಸಕ ಸ್ಥಾನದ ಜೊತೆಗೆ ನಿಗಮ ಮಂಡಳಿ ಹುದ್ದೆಗೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಶಾಸಕರ ಬೆಂಬಲಿಗರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದರಎ. ಜಿಲ್ಲೆ ಜಿಲ್ಲೆಗಳಲ್ಲಿಯೂ ಶಾಸಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಕಾಂಗ್ರೆಸ್ ಮುಖಂಡರು, ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಮೂರು ಬಾರಿ ಶಾಸಕರಾಗಿದ್ದರೂ ಸುಬ್ಬಾರೆಡ್ಡಿ ಅವರನ್ನು ಕಡೆಗಣಿಸಲಾಗಿದ್ದು, ಸಚಿವ ಸ್ಥಾನ ನೀಡದೇ ದ್ರೋಹಬಗೆದಿದ್ದಾರೆ ಎಂದು ಬೆಂಬಲಿಗರು ಸಿಡಿದೆದ್ದಿದ್ದಾರೆ.

ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡರು ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ಮೂರು ತಾಲೂಕುಗಳನ್ನು ಬಂದ್‌ ಮಾಡಿದ್ದು, ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿಭಟನೆ ವೇಳೆ ಅಂಬರೀಶ್ ಎಂಬ ಬೆಂಬಲಿಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಕೂಡಲೇ ಆತನನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular