BIG NEWS : ‘ಚಂದ್ರಯಾನ-3’ ಸಕ್ಸಸ್ : ಪ್ರಧಾನಿ ಮೋದಿಯಿಂದ ಮೂರು ಮಹತ್ವದ ಘೋಷಣೆ

ಬೆಂಗಳೂರು : ಚಂದ್ರಯಾನ-3 ಸಕ್ಸಸ್ ಆದ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿ ವಿಜ್ಞಾನಿಗಳನ್ನು ಅಭಿನಂದಿಸಿ ನಂತರ ಮಾತನಾಡಿದರು.

‘ಚಂದ್ರಯಾನ-3’ ಸಕ್ಸಸ್ ಹಿನ್ನೆಲೆ ಪ್ರಧಾನಿ ಮೋದಿ ಮೂರು ಮಹತ್ವದ ಘೋಷಣೆ ಮಾಡಿದ್ದಾರೆ. ಏನಿದು ಮೂರು ಮಹತ್ವದ ಘೋಷಣೆ.

1) ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ : ಆಗಸ್ಟ್ 23 ರಂದು ಚಂದ್ರನ ಮೇಲೆ ಯಶಸ್ವಿಯಾಗಿ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗಿದೆ. ವಿಜ್ಞಾನಿಗಳ ಈ ಐತಿಹಾಸಿಕ ಸಾಧನೆಯ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವೆಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

2) ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ ಎಂದು ಮೋದಿ ಹೇಳಿದ್ದಾರೆ .ಅದೇ ರೀತಿ ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಕರೆಯೋಣ ಎಂದು ಮೋದಿ ಘೋಷಣೆ ಮಾಡಿದರು.

3) ಚಂದ್ರಯಾನ-3 ಸಕ್ಸಸ್ ಆದ ಹಿನ್ನೆಲೆ ಸೆಪ್ಟೆಂಬರ್ 1 ರಂದು ‘ಚಂದ್ರಯಾನ-3’ ಬಗ್ಗೆ ಕ್ವಿಜ್ ಸ್ಪರ್ಧೆ ಆಯೋಜನೆ ಮಾಡಲಾಗುತ್ತದೆ ಎಂದು ಮೋದಿ ಹೇಳಿದರು.

ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ ಎಂದು ಹೇಳುವ ವೇಳೆ ವಿಜ್ಞಾನಿಗಳ ಸಾಧನೆ ನೆನೆದು ಪ್ರಧಾನಮಂತ್ರಿ ಮೋದಿ ಭಾವುಕರಾದರು. ಪ್ರತಿಯೊಬ್ಬ ವಿಜ್ಞಾನಿಗೂ ನನ್ನಿಂದ ಸಲ್ಯೂಟ್. ನಿಮ್ಮ ಧೈರ್ಯ, ಶಕ್ತಿ, ಶ್ರಮ, ಸಾಮರ್ಥ್ಯಕ್ಕೆ ನನ್ನ ನಮನಗಳು ಎಂದು ಮೋದಿ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read