ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಪರಾಧಿಗಳಿಗೆ, ಕೈದ್ಗಳುಗೆ ವಿವಿಧ ಸೌಲ್ಯಭ್ಯಗಳನ್ನು ನೀಡಲಾಗುತ್ತಿದ್ದು, ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿದ್ದ ಉಗ್ರರಿಗೂ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದಿದೆ.
ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಜೈಲಿನ ಸೆಲ್ ನಲ್ಲಿರುವ ಉಗ್ರರು, ರೇಪಿಸ್ಟ್ ಉಮೇಶ್ ರೆಡ್ದಿ, ಗೋಲ್ಡ್ ಸ್ಮಗ್ಲಿಂಗ್ ಕೇಸ್ ಆರೋಪಿ ರನ್ಯಾ ರಾವ್ ಸೇರಿದಂತೆ ಹಲವು ಅಪರಾಧಿಗಳು ರಾಜಾರೋಷವಾಗಿ ಮೊಬೈಲ್ ಫೋನ್ ಬಳಸುತ್ತಿರುವುದು ಕಂಡು ಬಂದಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಉತ್ತರ ನೀಡದೇ ತೆರಳಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದಷ್ಟೆ ಹೇಳಿ ಸ್ಥಳದಿಂದ ತೆರಳಿದ್ದಾರೆ.
TAGGED:ಸಿದ್ದರಾಮಯ್ಯ
