HomeKarnatakaರೆಸ್ಟೋರೆಂಟ್‌ನಲ್ಲಿ ಊಟ ಮಾಡುತ್ತಿದ್ದಾಗಲೇ ಹಠಾತ್ ಹೃದಯಾಘಾತ: ವ್ಯಕ್ತಿ ಸ್ಥಳದಲ್ಲೇ ಸಾವು

ರೆಸ್ಟೋರೆಂಟ್‌ನಲ್ಲಿ ಊಟ ಮಾಡುತ್ತಿದ್ದಾಗಲೇ ಹಠಾತ್ ಹೃದಯಾಘಾತ: ವ್ಯಕ್ತಿ ಸ್ಥಳದಲ್ಲೇ ಸಾವು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಕ್ಕಳು, ಯುವಕರು, ಮಧ್ಯ ವಯಸ್ಕರರು ಕೂಡ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆ. ಹೃದಯಾಘಾತ ಎಂಬುದು ಯಾರಿಗೆ ಎಷ್ಟು ಹೊತ್ತಿಗೆ ಹೇಗೆ ಸಂಭವಿಸುತ್ತದೆ ಎಂಬುದೇ ಗೊತ್ತಾಗುವುದಿಲ್ಲ. ಇಂದು ನಮ್ಮೊಂದಿಗೆ ಕಣ್ಮುಂದೆ ಇರುವವರು ನಾಳೆ ಹೃದಯಾಘಾತಕ್ಕೊಳಗಾಗಿ ಕಣ್ಮರೆಯಾಗಿಬಿಡುತ್ತಾರೆ. ಇಂತದ್ದೇ ಒಂದು ಘಟನೆ ರಾಜ್ಯ ರಾಜಧಾನಿ ಬೆಂಗಳುರಿನ ರೆಸ್ಟೋರೆಂಟ್ ನಲ್ಲಿ ಸಂಭವಿಸಿದೆ.

ರೆಸ್ಟೋರೆಂಟ್ ನಲ್ಲಿ ಊಟಕ್ಕೆ ಕುಳಿತಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಹೃದಯಗಹಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಗೊಟ್ಟಿಗೆರೆಯಲ್ಲಿರುವ ‘ಗುರು ಗ್ರೀನ್ಸ್ ಫ್ಯಾಮಿಲಿ ರೆಸ್ಟೋರೆಂಟ್’ನಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರು ಗ್ರೀನ್ಸ್ ಫ್ಯಾಮಿಲಿ ರೆಸ್ಟೋರೆಂಟ್ ಹಾಗೂ ಬಾರ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಚಂದ್ರು (42) ಮೃತ ದುರ್ದೈವಿ. ಚಂದ್ರು ಅವರು ರೆಶ್ತೋರೆಂಟ್ ನಲ್ಲಿ ಟೇಬಲ್ ಒಂದರ ಬಳಿ ಕುಳಿತು ಊಟ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ಹೀಗೆ ಕುಸಿದು ಬಿದ್ದವರೇ ಕೊನೆಯುಸಿರೆಳೆದಿದ್ದಾರೆ.

ಅಕ್ಟೋಬರ್ 30 ರಂದು ಬೆಂಗಳೂರಿನ ಗೊಟ್ಟಿಗೆರೆಯಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ಮಧ್ಯಾಹ್ನದ ಊಟ ಮಾಡುತ್ತಿದ್ದಾಗ, ಚಂದ್ರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಮೂಲದ ಚಂದ್ರು, ಕಳೆದ ಕೆಲವು ವರ್ಷಗಳಿಂದ ‘ಗುರು ಗ್ರೀನ್ಸ್ ಫ್ಯಾಮಿಲಿ ರೆಸ್ಟೋರೆಂಟ್’ನ ಬಾರ್ ವಿಭಾಗದಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಚಂದ್ರು ಅವರು ಟೇಬಲ್ ಬಳಿ ಕುಳಿತು ಊಟ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದ್ದಕ್ಕಿದ್ದಂತೆ ಅವರಿಗೆ ಎದೆನೋವು ಕಾಣಿಸಿಕೊಂಡಿತು; ಅವರು ತೀವ್ರವಾಗಿ ಒದ್ದಾಡಿ, ಬಳಿಕ ಟೇಬಲ್ ಮೇಲೆಯೇ ಕುಸಿದು ಬಿದ್ದರು. ಮೊದಲು ಎಡಭಾಗಕ್ಕೆ ಬಿದ್ದ ಅವರು, ಸ್ವಲ್ಪ ಹೊತ್ತು ಎದ್ದು ಕುಳಿತರು, ನಂತರ ಬಲಬದಿಗೆ ನೆಲದ ಮೇಲೆ ಬಿದ್ದುಬಿಟ್ಟಿದ್ದಾರೆ.

ಕೂಡಲೇ ಅಲ್ಲಿನ ಸಿಬ್ಬಂದಿ ಅವರ ಸಹಾಯಕ್ಕೆ ಧಾವಿಸಿ, ಪ್ರಜ್ಞೆ ಬರಿಸುವ ಪ್ರಯತ್ನವಾಗಿ ಸಿಪಿಆರ್ (CPR) ನೀಡಿದರು. ಚಂದ್ರು ಅವರ ತಲೆಯ ಮೇಲೆ ನೀರನ್ನು ಕೂಡ ಸುರಿದು, ಪ್ರಜ್ಞೆ ಬರುವಂತೆ ಮಾಡಲು ಪ್ರಯತ್ನಿಸಿದರು. ಆದರೆ, ಈ ಪ್ರಯತ್ನಗಳು ಫಲ ನೀಡಲಿಲ್ಲ; ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಈ ಸಂಪೂರ್ಣ ಘಟನೆಯು ರೆಸ್ಟೋರೆಂಟ್‌ನಲ್ಲಿದ್ದ ಸಿಸಿಟಿವಿ (CCTV) ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಹುಳಿಮಾವು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular