HomeKarnatakaಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ ಮಾದರಿ ಕಾರ್ಯ: ಬೋರ್ ವೆಲ್ ಕೊರೆಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ

ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ ಮಾದರಿ ಕಾರ್ಯ: ಬೋರ್ ವೆಲ್ ಕೊರೆಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ

ಬೆಳಗಾವಿ: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಯೊಬ್ಬರು ಸ್ವಂತ ಹಣದಿಂದ ಕೊಳೆವೆ ಬಾವಿ ಕೊರೆಸಿ ಗ್ರಾಮಸ್ಥರಿಗೆ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ. ಈ ಮಾದರಿ ಕಾರ್ಯದ ಮೂಲಕ ನಟನಿಗೆ ಹೆಮ್ಮೆ ತರುವ ಕೆಲಸ ಮಾಡಿದ್ದಾರೆ.

ಬೆಳಗಾವಿ ತಾಲೂಕಿನ ವಾಗವಾಡೆ ಗ್ರಾಮದ ಆದಿ ನಾಯಕ ಎಂಬ ಯುವಕ ಇಂತಹ ಸಾಮಾಜಿಕ ಕಾರ್ಯ ಮಾಡಿದ ಅಭಿಮಾನಿಯಾಗಿದ್ದಾರೆ. ಆದಿ ನಾಯಕ ಅವರು ಸುದೀಪ್ ಅವರ ಅಪ್ಪಟ ಅಭಿಮಾನಿಯಾಗಿದ್ದು, ನೆಚ್ಚಿನ ನಟನ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿದ್ದಾರೆ.

ಗ್ರಾಮದಲ್ಲಿನ ಕುಡಿಯುವ ನೀರಿನ ತೊಂದರೆ ನಿವಾರಿಸಲು ಸುದೀಪ್ ಜನ್ಮದಿನದಂದು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ನಂತರ ಕೇಕ್ ಕತ್ತರಿಸಿ ಶುಭಾಶಯ ಕೋರಿದ್ದಾರೆ. ಅವರ ಈ ಸಾಮಾಜಿಕ ಕಳಕಳಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಾಲತಾಣಗಳಲ್ಲಿಯೂ ಅಭಿನಂದನೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular