ನಿರ್ಮಾಪಕರ ವಿರುದ್ಧ ದೂರು ನೀಡಿದ ಸುದೀಪ್ ಅಭಿಮಾನಿ

ಚಾಮರಾಜನಗರ: ನಟ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ತಿಕ್ಕಾಟಕ್ಕೆ ಸಂಬಂಧಿಸಿದಂತೆ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಈ ಮೂಲಕ ಸುದೀಪ್ ಮತ್ತು ನಿರ್ಮಾಪಕರ ನಡುವಿನ ಕದನ ಪೊಲೀಸ್ ಠಾಣೆ ಮೆಟ್ಟಿಲೇರಿದಂತಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಅವರ ವಿರುದ್ಧ ನಿರ್ಮಾಪಕ ಕುಮಾರ್ ಫಿಲ್ಮ್ ಚೇಂಬರ್ ಎದುರು ಧರಣಿ ನಡೆಸಿದ್ದರು. ತಮ್ಮ ವಿರುದ್ಧ ಆರೋಪ ಮಾಡಿದ ಕುಮಾರ್ ಅವರ ವಿರುದ್ಧ ಸುದೀಪ್ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈಗ ಸುದೀಪ್ ಅಭಿಮಾನಿ ಒಬ್ಬರು ಚಾಮರಾಜನಗರದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂ.ಎನ್. ಕುಮಾರ್ ಹಾಗೂ ಎಂ.ಎನ್. ಸುರೇಶ್ ಇಲ್ಲಸಲ್ಲದ ಆರೋಪ ಮಾಡಿ ಮಾನಹಾನಿ ಮಾಡುತ್ತಿದ್ದಾರೆ. ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗೇಂದ್ರ ಚಾಮರಾಜನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read