HomeEntertainmentBIG NEWS: ನಟ ಕಿಚ್ಚ ಸುದೀಪ್ ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ

BIG NEWS: ನಟ ಕಿಚ್ಚ ಸುದೀಪ್ ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ

ಬೆಂಗಳೂರು: ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಬಿಜೆಪಿಯೊಂದಿಗೆ ಗುರುತಿಸಿಕೊಂಡು ಅವರು ಸ್ಟಾರ್ ಪ್ರಚಾರಕರಾಗುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಮ್ಮುಖದಲ್ಲಿ ಸುದೀಪ್ ಬಿಜೆಪಿ ಸೇರುವ ಸಾಧ್ಯತೆ ಇದೆ. ಆದರೆ, ವಿದಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸುವುದಿಲ್ಲ. ಚಿಕ್ಕಪೇಟೆ ಕ್ಷೇತ್ರದಿಂದ ಸುದೀಪ್ ಅವರ ಆಪ್ತ ಜಾಕ್ ಮಂಜು ಸ್ಪರ್ಧಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುದೀಪ್ ಅವರನ್ನು ರಾಜಕೀಯ ಕರೆತರುವ ಪ್ರಯತ್ನ ಹಿಂದಿನಿಂದಲೂ ನಡೆಯುತ್ತಿತ್ತು. ಆದರೆ, ಅದು ಕೈಗೂಡಲಿಲ್ಲ. ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಆತ್ಮೀಯ ಒಡನಾಟ ಹೊಂದಿರುವ ಸುದೀಪ್ ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ. ಈಗ ಅವರು ಬಿಜೆಪಿ ಸೇರಲು ಆಸಕ್ತಿ ತೋರಿಸಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular