HomeKarnatakaನಟ ಸುದೀಪ್ ತಾಯಿ ಸರೋಜಾ ಅಂತ್ಯಕ್ರಿಯೆ

ನಟ ಸುದೀಪ್ ತಾಯಿ ಸರೋಜಾ ಅಂತ್ಯಕ್ರಿಯೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರ ಅಂತ್ಯಕ್ರಿಯೆ ಇಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನೆರವೇರಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸರೋಜಾ ನಿಧನರಾಗಿದ್ದರು. ಜೆಪಿ ನಗರದ ನಿವಾಸಕ್ಕೆ ಮೃತದೇಹ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಚಿತ್ರರಂಗ, ರಾಜಕೀಯ ಗಣ್ಯರು, ಕುಟುಂಬದವರು, ಅಭಿಮಾನಿಗಳು ಅಂತಿಮ ದರ್ಶನ ಪಡೆದ ನಂತರ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರಕ್ಕೆ ತರಲಾಗಿದೆ.

ಸುದೀಪ್ ಅಂತಿಮ ವಿಧಿ ವಿಧಾನ ನೆರವೇರಿಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. ಈ ವೇಳೆ ಸುದೀಪ್ ಹಾಗೂ ಕುಟುಂಬದವರು ಭಾವುಕರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular