HomeKarnatakaಬಿಜೆಪಿ ಅಭ್ಯರ್ಥಿಗಳ ಪರ 3 ಜಿಲ್ಲೆಗಳಲ್ಲಿಂದು ನಟ ಸುದೀಪ್ ಭರ್ಜರಿ ಪ್ರಚಾರ

ಬಿಜೆಪಿ ಅಭ್ಯರ್ಥಿಗಳ ಪರ 3 ಜಿಲ್ಲೆಗಳಲ್ಲಿಂದು ನಟ ಸುದೀಪ್ ಭರ್ಜರಿ ಪ್ರಚಾರ

ಬೆಂಗಳೂರು: ಇಂದು ಮೂರು ಮೂರು ಜಿಲ್ಲೆಗಳಲ್ಲಿ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಬಳ್ಳಾರಿ ಜಿಲ್ಲೆ ಸಂಡೂರು ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ ಪರವಾಗಿ ಸುದೀಪ್ ಮತಯಾಚಿಸಲಿದ್ದಾರೆ. ನಂತರ ಹಾವೇರಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ. ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಪರವಾಗಿ ಪ್ರಚಾರ ನಡೆಸಲಿರುವ ಅವರು ರಾಣೇಬೆನ್ನೂರಿನಲ್ಲಿ ಅರುಣ್ ಪೂಜಾರ್ ಪರ ಪ್ರಚಾರ ನಡೆಸುವರು. ನಂತರ ಸುದೀಪ್ ಬ್ಯಾಡಗಿಯಲ್ಲಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಪರವಾಗಿ ಮತ ಬೇಟೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಸುದೀಪ್ ರೋಡ್ ಶೋ ನಡೆಯಲಿದೆ. ಬಿಜೆಪಿ ಅಭ್ಯರ್ಥಿ ಎಂ.ಆರ್. ಪಾಟೀಲ್ ಪರವಾಗಿ ಮತಯಾಚಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular