HomeKarnatakaNPS ರದ್ದತಿಗೆ ಆಗ್ರಹಿಸಿ ಹೋರಾಟ ನಡೆಸ್ತಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

NPS ರದ್ದತಿಗೆ ಆಗ್ರಹಿಸಿ ಹೋರಾಟ ನಡೆಸ್ತಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಎನ್‌ಪಿಎಸ್ ರದ್ದತಿಗೆ ಆಗ್ರಹಿಸಿ ಸರ್ಕಾರಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದಯವಿಟ್ಟು ಮುಷ್ಕರ ಕೈಬಿಡಿ ಎಂದು ಮನವಿ ಮಾಡಿದ್ದಾರೆ.

ಎನ್‌ಪಿಎಸ್ ಬಗ್ಗೆ ಬೆಳಗಾವಿ ಅಧಿವೇಶನದಲ್ಲೂ ಚರ್ಚೆಯಾಗಿತ್ತು. ಸರ್ಕಾರ ನಿಮ್ಮೆಲ್ಲರ ಪರವಾಗಿದೆ. ನಾನು ಸಹ ಸರ್ಕಾರಿ ನೌಕರನ ಪುತ್ರನಾಗಿದ್ದೇನೆ. ನಾನು ಕೂಡ ವೈಯಕ್ತಿಕವಾಗಿ ನಿಮ್ಮ ಜೊತೆಗೆ ಇದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎನ್‌ಪಿಎಸ್ ಕೇಂದ್ರ ಮಟ್ಟದಲ್ಲಿ ಜಾರಿಗೆ ಬಂದಿದೆ. ಕೊರೋನಾ ಕಷ್ಟದಲ್ಲಿಯೂ 7ನೇ ವೇತನ ಆಯೋಗ ಜಾರಿ ಮಾಡಿದ್ದೇವೆ. ಮುಂದಿನ ಬಜೆಟ್ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡೋಣ. ಮುಖ್ಯ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ಕೊಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಸರ್ಕಾರಿ ನೌಕರರ ಯೋಗ ಕ್ಷೇಮ ವಿಚಾರಿಸುವುದು ನಮ್ಮ ಕರ್ತವ್ಯವಾಗಿದೆ. ದಯವಿಟ್ಟು ಮುಷ್ಕರ ಕೈ ಬಿಡಿ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ನಡೆಸುತ್ತಿರುವ ಸರ್ಕಾರಿ ನೌಕರರನ್ನು ಭೇಟಿ ಮಾಡಿದ ಅವರು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular