ನವದೆಹಲಿ: ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಯಾರೆಂದೇ ನನಗೆ ಗೊತ್ತಿಲ್ಲ. ಯಾಕೆ ನನ್ನ ಹೆಸರು ಬರೆದಿದ್ದಾನೆ ಎಂದೂ ಗೊತ್ತಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾಪಂಚಾಯತ್ ಸಿಇಎ ಅವರ ಕಾರು ಚಾಲಕ ಬಾಬು ಎಂಬಾತ ಸಂಸದ ಸುಧಾಕರ್ ಹಾಗೂ ಬೆಂಬಲಿಗರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಈ ಬಗ್ಗೆ ನವದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಸುಧಾಕರ್, ನನಗೆ ಬಾಬು ಎಂಬಾತ ಯಾರೆಂದು ಗೊತ್ತಿಲ್ಲ. ನಾನು ಆತನ ಮುಖ ಸಹ ನೋಡಿಲ್ಲ. ಆ ವ್ಯಕ್ತಿ ಯಾಕೆ ನನ್ನ ಹೆಸರು ಉಲ್ಲೇಖಿಸಿದ್ದಾನೆ ಗೊತ್ತಿಲ್ಲ ಎಂದರು.
ನಾಗೇಶ್ ಅವರ ಮಾವ ಚಿಕ್ಕಾಡಗನಹಳ್ಳಿ ಕೃಷ್ಣಮೂರ್ತಿ ಪರಿಚಯವಿದೆ. ಬಾಬು ಕುಟುಂಬದವರು ದೂರು ನೀಡಲು ಠಾಣೆಗೆ ಹೋದಾಗ ಅಲ್ಲಿನ ಪಿಎಸ್ ಐ ಡೆತ್ ನೋಟ್ ನಲ್ಲಿರುವಂತೆ ದೂರು ಕೊಡಿ ಎಂದಿದ್ದಾರೆ. ಈ ಬಗ್ಗೆ ಪಾರದರ್ಶಕವಾಗಿ ತನಿಖೆಯಾಗಲಿ ಎಂದರು.
ಇದರ ಹಿಂದೆ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರ ರಾಜಕೀಯವಿದೆ. ಯಾರೇ ತಪ್ಪಿತಸ್ಥರಿದ್ದರೂ ಅವರಿಗೆ ಶಿಕ್ಷೆಯಾಗಲಿ. ಕಾನೂನು ಏನೇ ಇರಲಿ ತನಿಖೆ ಪಾರದರ್ಶಕವಾಗಿ ತನಿಖೆ ಆಗಲಿ ಎಂದು ಆಗ್ರಹಿಸಿದರು.