ಬೆಳಗಾವಿ: ಇನಾಮ್ ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಕಾರ್ಮಿಕ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇದರೊಂದಿಗೆ ಬಾಯ್ಲರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಎಲ್ಲ ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೆಎಲ್ಇ ಆಸ್ಪತ್ರೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನ ರಾಘವೇಂದ್ರ ಗಿರಿಯಾಲ(35) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ನಿನ್ನೆ ಮೂವರು, ಇಂದು ಐದು ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ.

