HomeKarnatakaBIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಫ್ಯಾಕ್ಟರಿ

BIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಫ್ಯಾಕ್ಟರಿ

ಬೆಳಗಾವಿ: ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.

ಸಕ್ಕರೆ ಕಾರ್ಖಾನೆ ಬಾಯ್ಲರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಸಮಯದಲ್ಲಿ ಮುಗಿಲೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ್ದು, ಹೊತ್ತಿ ಉರಿದಿದೆ. ಘಟನೆಯಲ್ಲಿ 24 ಟನ್ ಬಾಯ್ಲರ್ ಸುಟ್ಟು ಭಸ್ಮವಾಗಿದೆ.

ಘಟನಾ ಸ್ಥಳಕ್ಕೆ 9 ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದದಲ್ಲಿ ನಿರತವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 5 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular