HomeEntertainment'ಶುಗರ್ ಫ್ಯಾಕ್ಟರಿ' ಚಿತ್ರದ ವಿಡಿಯೋ ಹಾಡು ರಿಲೀಸ್

‘ಶುಗರ್ ಫ್ಯಾಕ್ಟರಿ’ ಚಿತ್ರದ ವಿಡಿಯೋ ಹಾಡು ರಿಲೀಸ್

ನವೆಂಬರ್ 24ರಂದು ರಾಜ್ಯದ್ಯಂತ ತೆರೆ ಕಾಣಲು ಸಜ್ಜಾಗಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರದ ‘ಜಹಾಪನಾಹ್’ ಎಂಬ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದ್ದು, ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.

ಅಮೃತ ನಾಯಕ್ ಮತ್ತು ನಿಹಾಲ್ ತೌರೊ ಈ ಗೀತೆಯನ್ನು ಹಾಡಿದ್ದು, ಕಬೀರ್ ರಫಿ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೀಪಕ್ ಅರಸ್ ನಿರ್ದೇಶನದ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ಅಭಿನಯಿಸಿದ್ದು, ಸೋನಾಲ್ ಮಾಂತೇರೊ, ಅದ್ವಿತಿ ಶೆಟ್ಟಿ ಮತ್ತು ರೂಹಾನಿ ಶೆಟ್ಟಿ ಇವರಿಗೆ ಜೋಡಿಯಾಗಿದ್ದಾರೆ. ಸಂತೋಷ್ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಬಾಲಮಣಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಆರ್ ಗಿರೀಶ್ ನಿರ್ಮಾಣ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular