HomeAgricultureಸಕ್ಕರೆ ರಫ್ತಿಗೆ ಅನುಮತಿ ನೀಡಿದರೆ ರೈತರಿಗೆ ಪ್ರತಿ ಟನ್ ಕಬ್ಬಿಗೆ ಇನ್ನೂ 500 ರೂ. ಹೆಚ್ಚಿನ...

ಸಕ್ಕರೆ ರಫ್ತಿಗೆ ಅನುಮತಿ ನೀಡಿದರೆ ರೈತರಿಗೆ ಪ್ರತಿ ಟನ್ ಕಬ್ಬಿಗೆ ಇನ್ನೂ 500 ರೂ. ಹೆಚ್ಚಿನ ದರ

ವಿಜಯಪುರ: ಕೇಂದ್ರ ಸರ್ಕಾರ ಸಕ್ಕರೆ ರಫ್ತಿಗೆ ಅನುಮತಿ ನೀಡದ ಕಾರಣ ದೇಶದಲ್ಲಿಯೇ ಸಕ್ಕರೆ ಮಾರಾಟ ಮಾಡಬೇಕಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.

ಆಲಮಟ್ಟಿ ಸಮೀಪದ ಬೇನಾಳ ಆರ್.ಎಸ್. ಗ್ರಾಮದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೇಂದ್ರ ಸರ್ಕಾರ ಸಕ್ಕರೆ ರಫ್ತಿಗೆ ಅನುಮತಿ ನೀಡಿದಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ ಇನ್ನೂ 500 ರೂಪಾಯಿ ಹೆಚ್ಚಿನ ದರ ಸಿಗಲಿದೆ ಎಂದು ತಿಳಿಸಿದ್ದಾರೆ.

ಜಗತ್ತಿನಲ್ಲಿಯೇ ಕಬ್ಬಿಗೆ ಅತಿ ಹೆಚ್ಚು ಬೆಲೆ ನೀಡುತ್ತಿರುವ ದೇಶಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಪ್ರತಿ ಟನ್ ಕಬ್ಬಿಗೆ 3400ರೂ. ನೀಡಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಿಳಿಂದ ಎಥೆನಾಲ್ ಅನ್ನು ಲೀಟರ್ ಗೆ 65 ರೂ.ಕೊಟ್ಟು ಖರೀದಿಸುವ ಕೇಂದ್ರ ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಅದನ್ನು 95 ರೂಪಾಯಿಗೆ ಮಾರಾಟ ಮಾಡುತ್ತವೆ. ಇದರಿಂದ ಒಂದು ಲೀಟರ್ಗೆ 30 ರೂಪಾಯಿವರೆಗೆ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ನಷ್ಟ ಉಂಟಾಗುತ್ತಿದ್ದು, ಕೇಂದ್ರ ಸರ್ಕಾರದ ಈ ಧೋರಣೆಯನ್ನು ರೈತರು ಖಂಡಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular