ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ

ಮಂಡ್ಯ: ಮಂಡ್ಯ ತಾಲೂಕಿನ ಮೊಡಚಾಕನಹಳ್ಳಿಯಲ್ಲಿ ಕಬ್ಬಿನ ಗದ್ದೆಗೆ ತಗಲಿದ ಬೆಂಕಿ ನಂದಿಸಲು ಹೋದ ರೈತರೊಬ್ಬರು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸಜೀವ ದಹನವಾಗಿದ್ದಾರೆ.

ಮಹಾಲಿಂಗಯ್ಯ(60) ಮೃತಪಟ್ಟ ರೈತ ಎಂದು ಹೇಳಲಾಗಿದೆ. ಘಟನೆಯಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿದ್ದ ಕಬ್ಬು, ಬಾಳೆ, ತೆಂಗು ಸುಟ್ಟುಹೋಗಿದೆ. ಮಹಾಲಿಂಗಯ್ಯ ಅವರ ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಕ್ಕಪಕ್ಕದ ಗದ್ದೆಗಳಿಗೂ ವ್ಯಾಪಿಸಿದೆ. ಬೆಂಕಿ ನಂದಿಸಲು ಪ್ರಯತ್ನಿಸಿದ ಮಹಾಲಿಂಗಯ್ಯ ಕಾಲು ಜಾರಿ ಬಿದ್ದಿದ್ದು ಅವರಿಗೂ ಬೆಂಕಿ ತಗುಲಿದೆ. ದಟ್ಟ ಹೊಗೆ ಆವರಿಸಿದ್ದರಿಂದ ಅವರಿಗೆ ಹೊರಗೆ ಬರಲು ಸಾಧ್ಯವಾಗಿಲ್ಲ. ಗ್ರಾಮಸ್ಥರು ಸ್ಥಳಕ್ಕೆ ತೆರಳಿ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆದಾಗಲೇ ಮಹಾಲಿಂಗಯ್ಯ ಅವರಿಗೆ ಬೆಂಕಿ ತಗುಲಿ ಮೃತಪಟ್ಟಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಮೇಲುಕೋಟೆ ಶಾಸಕ ಸಿ.ಎಸ್. ಪುಟ್ಟರಾಜು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಸರ್ಕಾರದಿಂದ 5 ಲಕ್ಷ ರೂ. ಪರಿಹಾರ, ವೈಯಕ್ತಿಕವಾಗಿ ಎರಡು ಹಸು ಕೊಡಿಸುವ ಭರವಸೆ ನೀಡಿದ್ದಾರೆ. ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಜವರೇಗೌಡ, ಪಾಪಣ್ಣ, ಶಂಕರ, ಮಹೇಶ್ ಎಂಬುವರ ಗದ್ದೆಗಳಲ್ಲಿದ್ದ ಕಬ್ಬು ಬೆಂಕಿಯಿಂದ ಹಾಳಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read