ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆಭರಣದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿದೆ.
ಕಬ್ಬು ಬೆಳೆಗಾರರ ಪ್ರತಿಭಟನೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸಕ್ಕರೆ ಕಾರ್ಖಾನೆ ಆವರಣದಲ್ಲಿ ಘಟನೆ ನಡೆದಿದ್ದು, ಆವರಣದಲ್ಲಿ ನಿಲ್ಲಿಸಿದ ವಾಹನಗಳು, ಕಚೇರಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬೊಲೆರೋ ವಾಹನ ಸೇರಿ ಹಲವು ವಾಹನಗಳ ಗಾಜು ಪುಡಿ ಪುಡಿಯಾಗಿದೆ.
ಜಮಖಂಡಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ. ಬಾಕಿ ಬಿಲ್ ಪಾವತಿ ಮತ್ತು ಕಬ್ಬಿಗೆ ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದರು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ.
