HomeLatest Newsಕಬ್ಬಿನ ಟ್ರ್ಯಾಕ್ಟರ್ ಗಳಿಗೆ ಬೆಂಕಿ: 167 ಜನರ ವಿರುದ್ಧ ಎಫ್ಐಆರ್: 10 ರೈತರು ವಶಕ್ಕೆ

ಕಬ್ಬಿನ ಟ್ರ್ಯಾಕ್ಟರ್ ಗಳಿಗೆ ಬೆಂಕಿ: 167 ಜನರ ವಿರುದ್ಧ ಎಫ್ಐಆರ್: 10 ರೈತರು ವಶಕ್ಕೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಆವರಣಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿ ಕಬ್ಬು ತುಂಬಿದ್ದ 96 ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ.

ಒಟ್ಟು 167 ಜನರ ವಿರುದ್ಧ ಕೇಸ್ ದಾಖಲಿಸಿದ್ದು, 10 ರೈತರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 3500 ರೂ. ನೀಡುವಂತೆ ಆಗ್ರಹಿಸಿ ನವೆಂಬರ್ 13ರಂದು ಮುಧೋಳದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ರೈತರ ಪ್ರತಿಭಟನೆ ನಡುವೆ ರಬಕವಿ- ಬನಹಟ್ಟಿ ತಾಲೂಕಿನ ಸಮೀರವಾಡಿ ಸಕ್ಕರೆ ಕಾರ್ಖಾನೆ ಕಬ್ಬು ನುರಿಯಲು ಆರಂಭಿಸಿತ್ತು. ಇದನ್ನು ವಿರೋಧಿಸಿ ರೊಚ್ಚಿಗೆದ್ದ ರೈತರು 96 ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು, ಕಾರ್ಖಾನೆಗೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಎಸ್ಪಿ ಮಹಾಂತೇಶ್ವರ ಜಿದ್ದಿ ಸೇರಿ ಹಲವರು ಗಾಯಗೊಂಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular