HomeLatest NewsBREAKING NEWS: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ತನಿಖೆಗೆ ವಹಿಸಿ ಗೃಹ ಸಚಿವಾಲಯ...

BREAKING NEWS: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ತನಿಖೆಗೆ ವಹಿಸಿ ಗೃಹ ಸಚಿವಾಲಯ ಆದೇಶ

ಬೆಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಿ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್ ಐಎ ಗೆ ವಹಿಸಿದ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು ಕೊಲೆ ಪ್ರಕರಣದ ತನಿಖೆ ನಡೆಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಜನನಿಬಿಡ ಪ್ರದೇಶದ ರಸ್ತೆಯಲ್ಲಿ ಮೇ 1ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಅಬ್ಂಧ ಪ್ರಮುಖ ಆರೋಪಿ ನೌಶಾದ್ ಸೇರಿ 11 ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್ ಐಎಗೆ ವಹಿಸಿ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular