HomeKarnatakaBREAKING: ಉದ್ಯಮಿ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ...

BREAKING: ಉದ್ಯಮಿ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಎಫ್ಐಆರ್

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306 ಅಡಿ ಎಫ್ಐಆರ್ ದಾಖಲಿಸಲಾಗಿದೆ.

ಉದ್ಯಮಿ ಪ್ರದೀಪ್ ಅವರ ಪತ್ನಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಆರು ಜನರ ಹೆಸರನ್ನು ಉದ್ಯಮಿ ಪ್ರದೀಪ್ ಉಲ್ಲೇಖಿಸಿದ್ದರು. ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ. ರಮೇಶ್ ರೆಡ್ಡಿ, ಕೆ. ಗೋಪಿ, ಜಯರಾಮರೆಡ್ಡಿ, ರಾಘವ ಭಟ್ ಮತ್ತು ಸೋಮಯ್ಯ ಅವರ ಹೆಸರನ್ನು ಉದ್ಯಮಿ ಪ್ರದೀಪ್ ಉಲ್ಲೇಖಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವ್ಯವಹಾರದಲ್ಲಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಬಳಿಯ ಅಮಲಿಪುರ ನಿವಾಸಿ ಪ್ರದೀಪ್(47) ರಾಮನಗರ ತಾಲೂಕಿನ ನೆಟ್ಟಿಗೆರೆ ಬಳಿ ಕಾರ್ ನಲ್ಲಿ ತಲೆಗೆ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಒಂದೂವರೆ ಕೋಟಿ ರೂಪಾಯಿ ಹಣ ಪಡೆದು ರೆಸಾರ್ಟ್ ಗೆ ಪಾಲುದಾರನನ್ನಾಗಿ ಮಾಡಿಕೊಂಡಿದ್ದರು. ಆದರೆ, ಹಣ ಕೊಡದೇ ಮೋಸ ಮಾಡಿದ್ದಾರೆ. ರಾಜೀ ಸಂಧಾನ ಮಾಡುವ ಪ್ರಯತ್ನ ನಡೆಸಿದ ಅರವಿಂದ ಲಿಂಬಾವಳಿ ಸಹಾಯ ಮಾಡಿಲ್ಲವೆಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular