HomeKarnatakaಪತ್ನಿ ತಂಗಿಯೊಂದಿಗೆ ಹುಬ್ಬಳ್ಳಿಗೆ ಬಂದ ಭಾವ: ಆಟೋ ಚಾಲಕನ ಮನೆಯಲ್ಲಿ ಆತ್ಮಹತ್ಯೆ

ಪತ್ನಿ ತಂಗಿಯೊಂದಿಗೆ ಹುಬ್ಬಳ್ಳಿಗೆ ಬಂದ ಭಾವ: ಆಟೋ ಚಾಲಕನ ಮನೆಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಭಾವ, ನಾದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಮೊರಾರ್ಜಿ ನಗರದ ಆಟೋ ಚಾಲಕನ ಮನೆಯಲ್ಲಿ ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಪೀಣ್ಯ ನಿವಾಸಿ ಲೊಕೇಶರಾವ್ ಅಶೋಕರಾವ್(34), ಶಾಂತಾ ರಾಮೇಶ್ವರ ರಡ್ಡಿ(26) ಆತ್ಮಹತ್ಯೆ ಮಾಡಿಕೊಂಡವರು. ಪತ್ನಿಯ ತಂಗಿಯೊಂದಿಗೆ ಹುಬ್ಬಳ್ಳಿಗೆ ಬಂದಿದ್ದ ಲೋಕೇಶ್ ರಾವ್ ಆಟೋ ಬಾಡಿಗೆ ಪಡೆದುಕೊಂಡಿದ್ದಾನೆ. ಬೆಂಗಳೂರಿಗೆ ಹೋಗುವುದು ತಡವಾಗುತ್ತದೆ. ಸ್ವಲ್ಪ ಸಮಯ ರೆಸ್ಟ್ ಮಾಡಬೇಕಿದೆ ಎಂದು ಆಟೋ ಚಾಲಕನ ಬಳಿ ಕೇಳಿಕೊಂಡಿದ್ದಾರೆ. ಆಟೋ ಚಾಲಕ ಮಾರುತಿ ಜಾಧವ್ ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಇಬ್ಬರು ಒಂದೇ ವೇಲ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಳೆ ಹುಬ್ಬಳ್ಳಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular